1. ವಿದ್ಯಾರ್ಥಿಗಳ ಆಧಾರ್ ಸಂಖ್ಯೆ ಮತ್ತು ಆಧಾರ್ ನಲ್ಲಿ ಇರುವ ಹಾಗೆ ಹೆಸರು
2. ವಿದ್ಯಾರ್ಥಿಯ ಮೊಬೈಲ್ ಸಂಖ್ಯೆ
3. ವಿದ್ಯಾರ್ಥಿಗಳ ಇ-ಮೇಲ್ ಐ.ಡಿ.
4. ವಿದ್ಯಾರ್ಥಿಗಳ ಎಸ್.ಎಸ್.ಎಲ್.ಸಿ ನೋಂದಣಿ ಸಂಖ್ಯೆ
5. ವಿದ್ಯಾರ್ಥಿಯ ಹೆಸರಿನಲ್ಲಿ ಇರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್.ಡಿ ಸಂಖ್ಯೆ
6. ವಿದ್ಯಾರ್ಥಿಯು ವಿಕಲಚೇತನರಾಗಿದ್ದಲ್ಲಿ ಯು.ಡಿ.ಐ.ಡಿ ಗುರುತಿನ ಸಂಖ್ಯೆ
7. ವಿದ್ಯಾರ್ಥಿಯು ವಾಸವಿರುವ ಜಿಲ್ಲೆ , ತಾಲ್ಲೂಕು, ವಿಧಾನಸಭಾ ಕ್ಷೇತ್ರದ ಹೆಸರು ಮತ್ತು ಮನೆಯ ವಿಳಾಸ
8. ವಿದ್ಯಾರ್ಥಿಯ ಕಾಲೇಜು ದಾಖಲಾತಿ/ನೋಂದಣಿ ಸಂಖ್ಯೆ
9. ಸಂಬಂದಪಟ್ಟ ದಾಖಲೆಗಳ ಇ-ದೃಢೀಕರಣ ಸಂಖ್ಯೆ (ಅನ್ವಯವಾದಲ್ಲಿ )
10. ಹಾಸ್ಟೆಲ್ ವಿವರಗಳು (ಅನ್ವಯವಾದಲ್ಲಿ )
-
ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ವಿದ್ಯಾರ್ಥಿಯು ಕುಟುಂಬ ತಂತ್ರಾಂಶದಲ್ಲಿ ನೋಂದಣಿಯಾಗಿ ಕುಟುಂಬ ಗುರುತಿನ ಸಂಖ್ಯೆಯನ್ನು ಹೊಂದುವುದು ಕಡ್ಡಾಯವಾಗಿರುತ್ತದೆ. ನಿಮ್ಮ ಕುಟುಂಬ ಗುರುತಿನ ಸಂಖ್ಯೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ -
https://kutumba-services.karnataka.gov.in/KutumbaServices
ವಿದ್ಯಾರ್ಥಿಯ ಕುಟುಂಬ ಗುರುತಿನ ಸಂಖ್ಯೆ ಲಭ್ಯವಿಲ್ಲದಿದ್ದಲ್ಲಿ, ಕುಟುಂಬ ತಂತ್ರಾಂಶದಲ್ಲಿ ನೋಂದಣಿಯಾಗಲು ಇಲ್ಲಿ ಕ್ಲಿಕ್ ಮಾಡಿ -
https://kutumba.karnataka.gov.in/mykutumba
ವಿದ್ಯಾರ್ಥಿಯು ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು 2023-24 ನೇ ಸಾಲಿನ ವಿದ್ಯಾರ್ಥಿಯ ಶೈಕ್ಷಣಿಕ ಮಾಹಿತಿಯು UUCMS ತಂತ್ರಾಂಶದಲ್ಲಿ ಲಭ್ಯವಿರುವುದು ಅಥವಾ ಸಂಬಂಧಿಸಿದ ವಿಶ್ವವಿದ್ಯಾಲಯ / ಬೋರ್ಡ್ ಸದರಿ ಶೈಕ್ಷಣಿಕ ಮಾಹಿತಿಯನ್ನು UNIDATA ಸರ್ವರ್ ಗೆ ರವಾನಿಸುವುದು ಕಡ್ಡಾಯವಾಗಿರುತ್ತದೆ.
ವಿದ್ಯಾರ್ಥಿಯು ಹಾಸ್ಟೆಲರ್ ಎಂದು ಅರ್ಜಿ ಸಲ್ಲಿಸಲು ಸದರಿ ವಿದ್ಯಾರ್ಥಿಯ ವಸತಿನಿಲಯ ದಾಖಲಾತಿ ಮಾಹಿತಿಯು ರಾಜ್ಯ ವಸತಿನಿಲಯ ತಂತ್ರಾಂಶ (SHP) ಅಥವಾ ಎಸ್.ಎಸ್.ಪಿ - ಹೆಚ್.ಎಂ.ಐ.ಎಸ್ (SSP – HMIS) ತಂತ್ರಾಂಶದಲ್ಲಿ ಲಭ್ಯವಿರುವುದು ಕಡ್ಡಾಯವಾಗಿರುತ್ತದೆ.